ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 4 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 57 ಅಂಗನವಾಡಿ ಕಾರ್ಯಕರ್ತೆ ಹಾಗೂ 136 ಅಂಗನವಾಡಿ ಸಹಾಯಕಿ ಯರ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಸದ್ರಿ ಆಯ್ಕೆ ಪಟ್ಟಿಗಳ ಕುರಿತು ಆಕ್ಷೇಪಣೆಗಳಿದ್ದಲ್ಲಿ ಫೆಬ್ರವರಿ 24 ರ ಒಳಗಾಗಿ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಸಲ್ಲಿಸ ಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿಯನ್ನು ಕಛೇರಿ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.