ಹಿರ್ಗಾನ ಗ್ರಾಮದ ಚಿಕ್ಕಲ್‌ಬೆಟ್ಟು ಗುತ್ತಿನ ಜಗತ್ಪಾಲ ಅತಿಕಾರಿ(70) ಯವರು ಇಂದು (ಫೆ. 20ರಂದು) ನಿಧನರಾದರು.
ಇವರು ಭೂ ಅಭಿವೃದ್ಧಿ ಬ್ಯಾಂಕ್ ಕಾರ್ಕಳದಲ್ಲಿ ಹಲವಾರು ವರ್ಷ ಸೇವೆ ಸಲ್ಲಿಸಿ, 40 ವರ್ಷಗಳಿಂದ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾಗಿ, ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಭಜನಾ ಮಂಡಳಿಯ ಅಧ್ಯಕ್ಷರು ಹಾಗೂ ಗೌರವಾಧ್ಯಕ್ಷರಾಗಿ ವ್ಯಾಘ್ರ ಚಾಮುಂಡಿ ದೈವಸ್ಥಾನದ ಅಧ್ಯಕ್ಷರಾಗಿ, ಚಿಕ್ಕಲ್ ಬೆಟ್ಟು ಶಾಲೆಯ ಹಳೆ ವಿದ್ಯಾರ್ಥಿ ಸಂಘದಲ್ಲಿ ಹಾಗೂ ಗ್ರಾಮದ ಎಲ್ಲಾ ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದರು.