ಪರೀಕ್ಷೆಗಳಿರುವ ಕಾರಣ, ರಾತ್ರಿ ವೇಳೆ ಜೋರಾದ ಶಬ್ದದಿಂದ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಗೆ ತೊಂದರೆ ಆಗುತ್ತಿದ್ದು ಈ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಉಡುಪಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಈ ವಿಚಾರ ತಿಳಿಸಿರುವ ಅವರುನಾಗರಿಕರು ಜವಾಬ್ದಾರಿಯಿಂದ ವರ್ತಿಸಬೇಕು ಎಂದಿದ್ದಾರೆ.
ಕಾರ್ಯಕ್ರಮಗಳ ಸಮಯದ ಬಗ್ಗೆ ಸ್ವಯಂಪ್ರೇರಿತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ರಾತ್ರಿ 10ರವರೆಗೆ ಮಾತ್ರ ಮೈಕ್ ಅನುಮತಿ ನೀಡಲಾಗುವುದು, ನಂತರ ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಜೊತೆಗೆ, ಕಳೆದ ಒಂದೂವರೆ ವರ್ಷದಿಂದ ಕೋಳಿ ಅಂಕವನ್ನು ನಿಲ್ಲಿಸಲಾಗಿದ್ದು, ಇದರಿಂದ ಹಲವಾರು ಕುಟುಂಬಗಳಿಗೆ ಒಳಿತಾಗಿದೆ ಎಂದು ತಿಳಿಸಿದ್ದಾರೆ.
ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪೊಲೀಸರು ಪರವಾನಗಿ ನೀಡಿದರೂ, ಜೂಜಿನ ಮಾದರಿಯಲ್ಲಿ ನಡೆಸಿದರೆ ಕಷ್ಟವಾಗುತ್ತದೆ ಎಂದು ಅವರು ಹೇಳಿದ್ದಾರೆ.