ಕಾರ್ಕಳ: ಬಂಡಿಮಠ ಫೌಂಡೇಶನ್, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಮ್ ಈಶ್ವರ್ ಮಲ್ಪೆ ಇವರ ಸಹಯೋಗದಲ್ಲಿ ಬಡವರಿಗೆ ಕಿವಿಯ ಉಚಿತ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣಾ ಕಾರ್ಯಕ್ರಮವು ಕಾರ್ಕಳದ ಅಯ್ಯಪ್ಪ ನಗರ ವಿಜೇತ ವಿಶೇಷ ಶಾಲೆಯಲ್ಲಿ ಮಾರ್ಚ್ 02ರಂದು ಬೆಳಗ್ಗೆ 9.30ರಿಂದ 3.30 ರವರೆಗೆ ನಡೆಯಲಿದೆ.
ಈಶ್ವರ್ ಮಲ್ಪೆಯವರು ಅನೇಕ ಸಾಮಾಜಿಕ ಕಾರ್ಯವನ್ನು ಮುಂದುವರಿಸಿಕೊಂಡು ಬರುತ್ತಿದ್ದು, ಈಗ ಕಾರ್ಕಳದಲ್ಲಿ ವಿಘ್ನಹರ್ತ ಶ್ರವಣ ಚಿಕಿತ್ಸಾಲಯ ಸಹಯೋಗದೊಂದಿಗೆ ಶ್ರವಣದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಉಚಿತ ಶಿಬಿರವನ್ನು ಮಾಡುತ್ತಿದ್ದು, ಈ ಸಂಸ್ಥೆಯಿಂದ ಶ್ರವಣ ಯಂತ್ರಕ್ಕೆ ಆಗುವ ವೆಚ್ಚದ ಶೇ. 50 ಮೊತ್ತವನ್ನು ಸಂಸ್ಥೆಯು ಭರಿಸಲಾಗುತ್ತಿದ್ದು, ಅಗತ್ಯವಿರುವವರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಬಿರದಲ್ಲಿ ಭಾಗವಹಿಸಲು ನೋಂದಣಿ ಕಡ್ಡಾಯವಾಗಿದ್ದು ಮಕ್ಕಳು ಹಾಗೂ ಹಿರಿಯ ನಾಗರಿಕರಿಗೆ ಮೊದಲ ಆದ್ಯತೆ ನೀಡಲಾಗಿದೆ. ಮೊದಲು ನೋಂದಾಯಿಸಿದ 30 ಜನರಿಗೆ ಈ ಸೌಲಭ್ಯವನ್ನು ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ; 9902344399, 9900908021 ಹಾಗೂ 9845846213 ಸಂಪರ್ಕಿಸಬಹುದಾಗಿದೆ.