ತೀರ್ಥ ಹಳ್ಳಿಯ ಬೆಟ್ಟಮಕ್ಕಿಯ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಶ್ರೀನಿಧಿ (24) ಶವ ಪತ್ತೆಯಾಗಿದೆ.
ಕಾರ್ಕಳ ತಾಲ್ಲೂಕಿನ ಕುಕ್ಕಂದೂರು ಗ್ರಾಮದ ನಿವಾಸಿ ಆಗಿದ್ದ ಶ್ರೀನಿಧಿ ವರ್ಷದ ಹಿಂದೆ ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿ ಜತೆ ವಿವಾಹವಾಗಿದ್ದರು.
ಶ್ರೀನಿಧಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿದ್ದಾರೆ