ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಅಬೀದ ಗದ್ಯಾಳ ರವರು ಫೆ. 26 ರಂದು ಅಧಿಕಾರವನ್ನು ಸ್ವೀಕರಿಸಿದರು.

ನಿಕಟ ಪೂರ್ವ ಪ್ರಭಾರ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ನಾಗರಾಜ ನಾಯಕ್ ರವರಿಂದ ಅಧಿಕಾರ ಸ್ವೀಕರಿಸಿದರು.
ಅಬೀದ ಗದ್ಯಾಳ ಈ ಹಿಂದೆ ವಿಜಯಪುರ ಜಿಲ್ಲೆಯ ಇಂಡಿ ಉಪ ವಿಭಾಗದ ಉಪ ವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.