ಕಾರ್ಕಳ: ಮಿಯ್ಯಾರು ಗ್ರಾಮ ನಿವಾಸಿ ಗೀತಾ (53) ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 26 ರಂದು ನಡೆದಿದೆ.
ಇವರು ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದು ಹಾಗೂ ವಿಪರೀತ ಅಮಲು ಪದಾರ್ಥ ಸೇವಿಸುವ ಚಟವುಳ್ಳವರಾಗಿರುತ್ತಾರೆ.
ಇದೇ ಕಾರಣಕ್ಕೆ ಮನನೊಂದು ಮನೆಯ ಹಿಂಭಾಗ ಇರುವ ಕೊಟ್ಟಿಗೆಯಲ್ಲಿ ಪಕ್ಕಾಸಿಗೆ ಸೀರೆಯನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.