ಕಾರ್ಕಳ

ಮಣಿಪಾಲ ಜ್ಞಾನಸುಧಾ: ಗಣಕ ವಿಜ್ಞಾನ ಉಪನ್ಯಾಸಕರ ಕಾರ್ಯಾಗಾರ

ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಹಯೋಗದೊಂದಿಗೆ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರದಲ್ಲಿ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ ನಡೆಯಿತು.


ಉಡುಪಿ ಜಿಲ್ಲಾ ಉಪನಿರ್ದೇಶಕರಾದ ಮಾರುತಿ ಕಾರ್ಯಾಗಾರ ಉದ್ಘಾಟಿಸಿದರು. ಉಡುಪಿ ಜಿಲ್ಲಾಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ದಿನೇಶ್ ಎಂ ಕೊಡವೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಡಾ.ದಯಾನಂದ ಪೈ, ಉಡುಪಿ ಜಿಲ್ಲಾಗಣಕ ವಿಜ್ಞಾನ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಜ್ಞಾನೇಶ್ ಕೋಟ್ಯಾನ್, ಕಾರ್ಯದರ್ಶಿ ಶ್ರೀಮತಿ ಶಕುಂತಲಾ ರಾಜೇಶ್ ಪಾಲನ್, ಖಜಾಂಜಿ ಶ್ರೀಮತಿ ಬಿನು ಜಯಚಂದ್ರನ್ ಉಪಸ್ಥಿತರಿದ್ದರು.

ಎಸ್.ಎಮ್.ಎಸ್. ಪದವಿ ಪೂರ್ವ ಕಾಲೇಜು ಬ್ರಹ್ಮಾವರದ ಗಣಕಶಾಸ್ತ್ರ ಉಪನ್ಯಾಸಕರಾದ ಸಂತೋಷ್ ನೀಲಾವರ ಹಾಗೂ ಎಮ್.ಐ.ಟಿ. ಮಣಿಪಾಲದ ಐ.ಸಿ.ಟಿ. ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ನಿಶಾ ಪಿ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಮಣಿಪಾಲ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಸ್ವಾಗತಿಸಿ, ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ಶಮಿತಾ ನಿರೂಪಿಸಿ ವಂದಿಸಿದರು.

Related posts

ಮುದ್ರಾಡಿ ಪ್ರೌಢಶಾಲೆಯಲ್ಲಿ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ

Madhyama Bimba

ಅನುದಾನಿತ ಪದವಿಪೂರ್ವ ಕಾಲೇಜಿನ ಸಮಸ್ಯೆಗಳ ಪರಿಹಾರಕ್ಕೆ ಶಾಸಕರಿಗೆ ವಿನಂತಿ

Madhyama Bimba

ಕಾರ್ಕಳದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ : ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More