ಅಜೆಕಾರು : ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ ಶಿವರಾತ್ರಿ ಪ್ರಯುಕ್ತ ಪ್ರಾರ್ಥನೆ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ರುದ್ರಪಾರಾಯಣ, ಮಹಾಪೂಜೆ, ಅನ್ನಸಂತರ್ಪಣೆ ಶ್ರೀ ಮಠದ ಪ್ರಧಾನ ಅರ್ಚಕ ವಿದ್ವಾನ್ ಗುಡ್ಡೆಅಂಗಡಿ ರಾಘವೇಂದ್ರ ಭಟ್ ಇವರ ನೇತೃತ್ವದಲ್ಲಿ, ಆಡಳಿತ ಮೊಕ್ತೇಸರ ಚಿರಂಜಿತು ಅಜಿಲ ಇವರ ಸಹಕಾರದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸಿದ್ದಿವಿನಾಯಕ ಭಜನಾ ಮಂಡಳಿ ತೆಳ್ಳಾರು ಕಾರ್ಕಳ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಸದಸ್ಯರು, ಗ್ರಾಮಸ್ಥರು, ಭಕ್ತಾದಿಗಳು ಸೇರಿದಂತೆ ಸಾವಿರಾರು ಭಕ್ತರು ಭಾಗವಹಿಸಿದ್ದರು.