ಕಾರ್ಕಳ

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ ಬಿ ಆರ್ಕ್ ಮತ್ತುಜೆಇಇ ಬಿ ಪ್ಲಾನಿಂಗ್‌ನ ಫಲಿತಾಂಶ ಪ್ರಕಟವಾಗಿದ್ದು, ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವಕಾಲೇಜು ಈ ವರ್ಷವೂ ಅತ್ಯುನ್ನತ ಫಲಿತಾಂಶ ಪಡೆದುಕೊಂಡಿದೆ.

ಬಿ ಆರ್ಕ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಾದ ತೇಜಸ್ ವಿ ನಾಯಕ್ 99.4223451 ಪಸೆಂಟೈಲ್, ಸಾಚಿ ಶಿವಕುಮಾರ್ ಕಡಿ 99.3362631 ಪಸೆಂಟೈಲ್ ಗಳಿಸಿ ಉತ್ತಮ ಸಾಧನೆಗೈದಿದ್ದಾರೆ.

ಬಿ ಪ್ಲಾನಿಂಗ್ ಫಲಿತಾಂಶದಲ್ಲಿ ತೇಜಸ್ ವಿ ನಾಯಕ್ 99.5751775 ಪಸೆಂಟೈಲ್ ಗಳಿಸಿದ್ದಾರೆ.
ಹೀಗೆ ಒಟ್ಟು ಫಲಿತಾಂಶದಲ್ಲಿ 99 ಪಸೆಂಟೈಲಿಗಿಂತ ಅಧಿಕ 2 ವಿದ್ಯಾರ್ಥಿಗಳು, 98 ರಿಂದಅಧಿಕ 3, 95ಕ್ಕಿಂತ ಅಧಿಕ 8 ಹಾಗೂ 16ವಿದ್ಯಾರ್ಥಿಗಳು 90 ಪಸೆಂಟೈಲಿಗಿಂತ ಅಧಿಕ ಫಲಿತಾಂಶವನ್ನು ದಾಖಲಿಸಿರುತ್ತಾರೆ.

ವಿದ್ಯಾರ್ಥಿಗಳ ಸಾಧನೆಯನ್ನು ಪ್ರಾಂಶುಪಾಲರು, ಆಡಳಿತ ಮಂಡಳಿ, ಬೋಧಕ ಬೋಧಕೇತರ ವೃಂದದವರು ಹಾಗೂ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಸಂಯೋಜಕರಾದ ಸುಮಂತ್‌ದಾಮ್ಲೆರವರು ಅಭಿನಂದಿಸಿ ಶ್ಲಾಘಿಸಿದ್ದಾರೆ.

Related posts

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಾಲಿಬಾಲ್ ತಂಡ

Madhyama Bimba

ಬೆಳ್ಮಣ್ ಚರ್ಚ್ ಬಳಿ ಪಾದಚಾರಿಗೆ ಬೈಕ್ ಡಿಕ್ಕಿ: ಗಾಯ

Madhyama Bimba

ಹೆಬ್ರಿ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More