ಮಾ.2 ರಂದು ಕಾರ್ಕಳದ ಗಾಂಧಿ ಮೈದಾನದಲ್ಲಿ ಮದ್ಯಾಹ್ನ 2:30 ಗಂಟೆಗೆ ನಡೆಯಲಿರುವ “ಕಾಂಗ್ರೆಸ್ ಕುಟುಂಬೋತ್ಸವ”ದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ.
ಫೆ 28 ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್ ರವರು ಮಾ.2ರಂದು ಬೆಳಗ್ಗೆ ಕಾಪು ಶ್ರೀ ಹೊಸ ಮಾರಿಗುಡಿ ಪ್ರತಿಷ್ಠಾಪನೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಿ ಮಧ್ಯಾಹ್ನ 2:30ಗಂಟೆಗೆ ಕಾರ್ಕಳಕ್ಕೆ ಆಗಮಿಸಿ ಕಾಂಗ್ರೆಸ್ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಕಳದ ಶಾಸಕರಾಗಿ 50 ವರ್ಷ ಪೂರ್ಣಗೊಳಿಸಿದ ಹಾಗೂ ಕರ್ನಾಟಕ ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯ್ಲಿರವರಿಗೆ ವಿಶೇಷವಾಗಿ ಸನ್ಮಾನ ಕಾರ್ಯಕ್ರಮ ಹಾಗೂ ಹೆಬ್ರಿ ಮತ್ತು ಕಾರ್ಕಳ ನೂತನ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ಪದಾಧಿಕಾರಿಗಳ ಪದಗ್ರಹಣ ಅಭಿನಂದನೆ ಕಾರ್ಯಕ್ರಮ ಹಾಗೂ ಪಕ್ಷದ ಹಿರಿಯರಿಗೆ ಅಭಿನಂದನೆ ಮತ್ತು ವಿವಿಧ ಸಂಘ ಸಂಸ್ಥೆಗಳಿಗೆ ಸಹಾಯ ಧನ ವಿತರಣೆ ನಡೆಯಲಿದೆ ಕುಟುಂಬೋತ್ಸವ ಮುಖ್ಯ ಉದ್ದೇಶ ಎಂದು ಹೇಳಿದರು.
ರಾಜ್ಯ ಕಾಂಗ್ರೇಸ್ ಅಧ್ಯಕ್ಷರು ಮೊದಲ ಬಾರಿಗೆ ಬ್ಲಾಕ್ ಕಾರ್ಯಕರ್ತರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗ ವಹಿಸುವುದು ಕಾರ್ಕಳ ದಲ್ಲೇ ಮೊದಲು ಎಂದು ಹೇಳಿದರು.
ವಿವಿಧ ಭಾಷೆ ಧರ್ಮ ವಿವಿಧ ಸಂಪ್ರದಾಯಗಳನ್ನು ಆಚರಿಸುವ ಜನರನ್ನು ಕುಟುಂಬ ಎನ್ನುವ ಸಂದೇಶದಿಂದ ಕುಟುಂಬೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸುಮಾರು 10-15 ಸಾವಿರ ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಮತ್ತು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ.
ವಿಶೇಷ ವಾಗಿ ಆಹಾರ ಮೇಳ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಉಡುಪಿ ಉಸ್ತುವಾರಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶರತ್ ಬಚ್ಚೇಗೌಡ , ಉಭಯ ಜಿಲ್ಲೆಗಳ ಮಾಜಿ ಶಾಸಕರು ಹಾಗೂ ಹಾಲಿ ಶಾಸಕರುಗಳು ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ.
ಗೋಷ್ಠಿಯಲ್ಲಿ ತಾಲೂಕು ಗ್ಯಾರೆಂಟಿ ಯೋಜನೆ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ಕಾರ್ಕಳ ಬ್ಲಾಕ್ ಹಿಂದುಳಿದ ವರ್ಗಗಳ ಅಧ್ಯಕ್ಷ ಅನಿಲ್ ಪೂಜಾರಿ ನಲ್ಲಿಗುಡ್ಡೆ, ಕಿಸಾನ್ ಘಟಕದ ಅಧ್ಯಕ್ಷ ಉದಯ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಭಾಸ್ಕರ್, ಪುರಸಭಾ ಸದಸ್ಯ ಪ್ರವೀಣ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.