ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ಗ್ರಾಮ ಸಂಪರ್ಕ ಯೋಜನೆಯಡಿ ತೊಗಲು ಗೊಂಬೆ ಪ್ರದರ್ಶನದ ಮೂಲಕ ಆರೋಗ್ಯ, ಶಿಕ್ಷಣ, ಸರ್ಕಾರದ ಗ್ಯಾರಂಟಿ ಯೋಜನೆಗಳು, ಮದ್ಯಪಾನದ ದುಷ್ಪರಿಣಾಮ ಹೀಗೆ ಎಲ್ಲಾ ವಿಷಯಗಳನ್ನು ಒಳಗೊಂಡಂತೆ ಪ್ರದರ್ಶನದ ನಡೆಯಿತು.
ತೊಗಲು ಗೊಂಬೆ ಪ್ರದರ್ಶನ ತಂಡದ ನಾಯಕ ದೇವರಾಜ್ ಪ್ರಾಸ್ತಾವಿಕವಾಗಿ ಮಾಹಿತಿ ನೀಡಿದರು. ತಂಡದ ಏಳು ಮಂದಿ ಸಹ ಕಲಾವಿದರು, ಶಾಲೆಯ ಮುಖ್ಯ ಶಿಕ್ಷಕಿ ಶಶಿಕಲಾ, ಶಿಕ್ಷಕ ಶಿವಾನಂದ, ಪದವೀಧರ ಸಹ ಶಿಕ್ಷಕಿ ಪ್ರತಿಮಾ ಎಸ್, ಸಹ ಶಿಕ್ಷಕಿಯರಾದ ಮಧುಶ್ರೀ, ಅಶ್ವಿನಿ, ವಾಣಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.