ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾರ್ಕಳ ಮೈನ್ ಕಾರ್ಕಳ ಇಲ್ಲಿ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದ ಅಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶಾಲೆಗೆ ಡೆಸ್ಕ್ ಮತ್ತು ಬೆಂಚುಗಳ ವಿತರಣಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರಸಭಾ ವಾರ್ಡ್ ಮೆಂಬರ್ ಸುಮಾ ಕೇಶವ್ ವಹಿಸಿದ್ದರು.
ಯೋಜನಾಧಿಕಾರಿ ಹೇಮಲತಾ, ಮೇಲ್ವಿಚಾರಕಿ ಗೀತಾ, ಪೆರ್ವಾಜೆ ಒಕ್ಕೂಟದ ಅಧ್ಯಕ್ಷೆ ಸೌಮ್ಯ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಮಾಲಾಶ್ರೀ ಸಹ ಶಿಕ್ಷಕರಾದ ಶಿವಾನಂದ, ಅಶ್ವಿನಿ, ವಾಣಿ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಶಶಿಕಲ ಪ್ರಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಪದವೀಧರ ಸಹಶಿಕ್ಷಕಿ ಪ್ರತಿಮಾ ಎಸ್ ನಿರೂಪಿಸಿದರು. ಶಿಕ್ಷಕಿ ಮಧುಶ್ರೀ ವಂದಿಸಿದರು.