ಕಾರ್ಕಳ: ನಂದಳಿಕೆ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾ 7 ರಂದು
ಕಳ್ಳತನಕ್ಕೆ ಯತ್ನ ನಡೆದಿದೆ.
ಮಾ.07ರಂದು ಶಾಲೆಯ ಮುಖ್ಯ ಶಿಕ್ಷಕರ ಕೊಠಡಿಯ ಬಾಗಿಲಿನ ಬೀಗವನ್ನು ಮುರಿದು ಕಳ್ಳರು ಕಛೇರಿಯ ಒಳಗೆ ಪ್ರವೇಶಿಸಿ ಕಛೇರಿಯ ಒಳಗಿನ ಕಪಾಟಿನ ಬಾಗಿಲನ್ನು ತೆರದಿದ್ದಲ್ಲದೇ ರಿಜಿಸ್ಟರ್ ಪುಸ್ತಕಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡು ಬಂದಿದ್ದು ಯಾವುದೇ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿರುವುದಿಲ್ಲ.
ಬೀಗವನ್ನು ಮುರಿದು ಒಳಪ್ರವೇಶಿಸಿ ಕಳ್ಳತನ ಮಾಡಲು ಪ್ರಯತ್ನಿಸಿರುವುದಾಗಿದೆ.
ಈ ಬಗ್ಗೆ ಕಾರ್ಕಳ ಠಾಣೆ ಯಲ್ಲಿ ಪ್ರಕರಣ ದಾಖಲಾಗಿರುತ್ತದೆ