ಜಿಲ್ಲಾ ವ್ಯಾಪ್ತಿಯಲ್ಲಿ 2025-26 ನೇ ಸಾಲಿಗೆ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ನೀರಾವರಿ ಪಂಪುಸೆಟ್ಟುಗಳ ವಿದ್ಯುದ್ದೀಕರಣಕ್ಕೆ (ವಿದ್ಯುತ್ ಮಾರ್ಗಗಳನ್ನು ಮೆಸ್ಕಾಂ ವತಿಯಿಂದ ನಿರ್ಮಿಸಲು) ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಗಳು ಆರ್.ಟಿ.ಸಿ ಹಾಗೂ ಜಾತಿ ಪ್ರಮಾಣ ಪತ್ರದೊಂದಿಗೆ ಹತ್ತಿರದ ಉಪವಿಭಾಗದಲ್ಲಿ ಒಂದು ತಿಂಗಳ ಒಳಗಾಗಿ ಅರ್ಜಿ ನೋಂದಾಯಿಸಬಹುದಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.