ಸುವರ್ಣ ಕರ್ನಾಟಕ ರಾಜ್ಯ ಸಮಿತಿ ಜೈ ಭೀಮ್ ಸೇನೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮೂಡುಬಿದಿರೆ ಆಡಳಿತ ಸೌಧ ಮುಂಭಾಗದಲ್ಲಿ ಎ 20 ರಂದು ಅಂಬೇಡ್ಕರ್ ಜಯಂತಿ ನಡೆಯಲಿದೆ ಎಂದು ಸೇನೆ ರಾಜ್ಯಾಧ್ಯಕ್ಷ ವರ್ತುರು ಮಂಜುನಾಥ್ ತಿಳಿಸಿದ್ದಾರೆ.
ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಅಂದು ಬೈಕ್ ರ್ಯಾಲಿ, ಹಾಗು ಭವ್ಯ ಮೆರವಣಿಗೆ ನಡೆಯಲಿದೆ. ಸುಮಾರು ಒಂದು ಸಾವಿರ ಜನ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಶಾಸಕ ಉಮಾನಾಥ್ ಕೋಟ್ಯಾನ್ ಸಭೆಯಲ್ಲಿ ಅಧ್ಯಕ್ಷತೆ ವಹಿಸಲಿದ್ದು, ಬಿಗ್ ಬಸ್ ಖ್ಯಾತಿಯ ವರ್ತುರ್ ಸಂತೋಷ, ಚಿತ್ರ ನಟ ಸಂದೇಶ್, ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ನವೀನ್ ಚಿಂಗ, ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷ ಪ್ರವೀಣ್ ಎಸ್., ಉಪಾಧ್ಯಕ್ಷ ರಂಜಿತ್ ಕುಮಾರ್, ಸುಧೀರ್, ಪ್ರಧಾನ ಕಾರ್ಯದರ್ಶಿ ಚೇತನ್ ಕುಮಾರ್ ಭಾಗವಹಿಸಿದ್ದರು.