ಮೆಸ್ಕಾಂ ನಿಟ್ಟೆ ಉಪವಿಭಾಗ ಕಛೇರಿಯಲ್ಲಿ ಏಪ್ರಿಲ್ 22 ರಂದು ಬೆಳಗ್ಗೆ 10.30 ಕ್ಕೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ, ಗ್ರಾಹಕರು ಈ ಅವಕಾಶವನ್ನು ಸದುಪಯೋಗಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:- 8277882890 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮೆಸ್ಕಾಂನ ಕಚೇರಿ ಪ್ರಕಟಣೆ ತಿಳಿಸಿದೆ.