Blog

ದೇಶದ ವಿಚಾರದಲ್ಲಿ ರಾಜಕೀಯ ಟೀಕೆ ಪ್ರಚಾರ ಪಡೆಯುವ ಬಿಜೆಪಿ

*ಕಾರ್ಕಳ ಬಿಜೆಪಿಯವರಿಗೆ ಕಾಂಗ್ರೆಸ್ ನಿಲುವಿನ ಮಾಹಿತಿ ಬೇಕಿದ್ದರೆ  ಕೇಂದ್ರ ಸಚಿವರಾದ ಕಿರಣ್ ರಿಜಿಜುಗೆ ಕರೆ ಮಾಡಲಿ: ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ*

ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಯಶಸ್ವಿಯ ನಂತರ ಮೇ 08 ನೇ ತಾರೀಖು ಗುರುವಾರದಂದು   ಕೇಂದ್ರ ಸರ್ಕಾರದ ರಕ್ಷಣಾ ಸಚಿವರಾದ ರಾಜನಾಥ ಸಿಂಘ್  ಅವರ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಎ.ಐ.ಸಿ‌ಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಸಹಿತ ಕಾಂಗ್ರೆಸ್ ವರಿಷ್ಟ ನಾಯಕರು ಪಾಲ್ಗೊಂಡಿದ್ದರು. ಸರ್ವ ಪಕ್ಷಗಳ ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ವಿಚಾರಗಳ ಮಾಹಿತಿ ಹಾಗೂ ಕಾಂಗ್ರೆಸ್ ಸಹಿತ ಸರ್ವ ಪಕ್ಷಗಳ ನಿಲುವು ಏನೆಂದು ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳ ಸಚಿವರಾದ ಕಿರಣ್ ರಿಜುಜು ಮಾದ್ಯಮಗಳಿಗೆ ಬಿಡುಗಡೆ ಮಾಡಿದ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅದರಲ್ಲಿ ಪ್ರಮುಖವಾಗಿ, ರಾಷ್ಟ್ರದ ಸುರಕ್ಷತೆಗಾಗಿ ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಮ್ಮ ಪೂರ್ಣ ಬೆಂಬಲವಿದೆ ಎಂದು ಸರ್ವ ಪಕ್ಷಗಳೂ ತಮ್ಮ ನಿರ್ಧಾರವನ್ನು ಸರ್ಕಾರಕ್ಕೆ ತಿಳಿಸಿದ್ದಾರೆ ಎಂದು ಮಾದ್ಯಮಗಳೊಂದಿಗೆ ಕೇಂದ್ರ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.

ವಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆ ಸಹಿತ ಎಲ್ಲಾ ಪ್ರಮುಖ ಪಕ್ಷಗಳ ನಾಯಕರು ಸರ್ಕಾರದ ಜೊತೆಗೆ ನಾವಿದ್ದೇವೆ, ಸರ್ವ ಪಕ್ಷಗಳ ಸಭೆಯಲ್ಲಿ ಸರ್ಕಾರದ ನಡೆಗೆ ವಿರುದ್ದವಾಗಿ  ಯಾರೂ ಯಾವುದೇ ಆಕ್ಷೇಪ ಎತ್ತಲಿಲ್ಲ, ಎಲ್ಲಾ ಪಕ್ಷಗಳು ದೇಶದ ವಿಚಾರದಲ್ಲಿ ಅತ್ಯಂತ ಪ್ರಭುದ್ದವಾದ ನಿಲುವನ್ನು ಪ್ರಕಟಪಡಿಸಿದ್ದಾರೆ ಎಂದು ಸ್ವತಃ ಕೇಂದ್ರ ಸರ್ಕಾರದ ಸಂದೀಯ ವ್ಯವಹಾರಗಳ ಸಚಿವರಾದ ಕಿರಣ್ ರಿಜುಜು ಅವರೇ ಮಾದ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ನಿಲುವುಗಳನ್ನು ತಿಳಿಯಲು ಕುತೂಹಲದಲ್ಲಿರುವ ಕಾರ್ಕಳ ಬಿಜೆಪಿ ತಮ್ಮ ಕುತೂಹಲ ತಣಿಸಲು ಕೇಂದ್ರ ಸಚಿವರಾದ ಕಿರಣ್ ರಿಜಿಜು ಅವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆಯಲಿ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತರಾ ಪ್ರದೀಪ್ ಬೇಲಾಡಿ ತಿಳಿಸಿದ್ದಾರೆ.

ದೇಶದಲ್ಲಿ ಯುದ್ದದ ಕಾರ್ಮೋಡ ಕವಿದಿರುವಾಗ, ದೇಶ ಸಂಕಟದಲ್ಲಿರುವಾಗ ದೇಶವನ್ನು ನಿಜವಾಗಿಯೂ ಪ್ರೀತಿಸುವವನು ರಾಜಕೀಯ ಟೀಕೆಗಳನ್ನು ಮಾಡಲು ಸಾಧ್ಯವಿಲ್ಲ, ದೇಶದ ಬಗ್ಗೆ ಕಾಳಜಿ ಇಲ್ಲದವರು,  ತೋರಿಕೆಗೆ  ದೇಶಭಕ್ತಿಯನ್ನು ಹೊಂದಿರುವವನು ಮಾತ್ರಾ ಈ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ರಾಜಕೀಯ ‌ಟೀಕೆಗಳನ್ನು ಮಾಡುತ್ತಾನೆ. ಪ್ರಸ್ತುತ ಕಾರ್ಕಳ ಬಿಜೆಪಿಯ  ಎಳಸುಗಳು ದೇಶ ಸಂಕಷ್ಟದಲ್ಲಿರುವ ಸಂದರ್ಭದಲ್ಲಿಯೂ ರಾಜಕೀಯ ಟೀಕೆಗಳ ಹೇಳಿಕೆಗಳನ್ನು ನೀಡಿ ಮಾದ್ಯಮದಲ್ಲಿ ಪ್ರಚಾರ ಪಡೆಯಲು ಯತ್ನಿಸುತ್ತಿರುವುದು ದೇಶದ ದೌರ್ಭಾಗ್ಯ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಹೆರ್ಮುಂಡೆ ಬಳಿ ಬೈಕ್ ಕಾರು ಅಪಘಾತ

Madhyama Bimba

ರಾಜ್ಯ ಸರಕಾರದಲ್ಲಿ ಹಣಕಾಸಿನ ಕೊರತೆ- ದರೆಗುಡ್ಡೆಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಿ ಶಾಸಕ ಕೋಟ್ಯಾನ್

Madhyama Bimba

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐ ಗೆ ವಹಿಸಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More