ಜಿಲ್ಲೆಯಲ್ಲಿ ಈಗಾಗಲೇ ಪ್ರಸಕ್ತ ಸಾಲಿನ ಮುಂಗಾರು ಮಳೆ ಪ್ರಾರಂಭವಾಗಿದ್ದು, ಈ ಸಂಧರ್ಭದಲ್ಲಿ ಗುಡುಗು-ಸಿಡಿಲಿನಿಂದ ಹಾಗೂ ಗಾಳಿ-ಮಳೆಯಿಂದ ಸಾರ್ವಜನಿಕ ಮತ್ತು ಜಾನುವಾರು ಪ್ರಾಣಹಾನಿಯಾಗುವ ಸಂಭವವಿರುತ್ತದೆ.
ಈ ಹಿಂದಿನ ಸಾಲಿನಲ್ಲಿ ಗುಡುಗು-ಸಿಡಿಲಿನಿಂದ ಮತ್ತು ಗಾಳಿ-ಮಳೆಯಿಂದ ಅಧಿಕ ಪ್ರಮಾಣದಲ್ಲಿ ಜಾನುವಾರು ಹಾಗೂ ಮಾನವ ಹಾನಿ ಸಂಭವಿಸಿದ್ದು, ಅದನ್ನು ತಡೆಗಟ್ಟಲು ಪ್ರಸ್ತುತ ಸಾಲಿನಲ್ಲಿ ಸಾರ್ವಜನಿಕರು ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಹಾಗೂ ಜಿಲ್ಲಾ ಪ್ರಾಧಿಕಾರದಿಂದ ಹೊರಡಿಸುವ ಮುನ್ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ಅಂತಹ ಸಂಧರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಆದಷ್ಟೂ ಮನೆಯಲ್ಲಿಯೇ ಇದ್ದು, ಯಾವುದೇ ಅನಾಹುತವಾಗದಂತೆ ಮುನ್ನೆಚ್ಚರಿಕೆ ಕ್ರಮವನ್ನು ವಹಿಸಬೇಕು. ಇದರಿಂದ ಸಂಭವಿಸಬಹುದಾದ ಮಾನವ ಹಾಗೂ ಜಾನುವಾರು ಹಾನಿಯನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.